ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಭುಗಿಲೆದ್ದ ಹಿಜಾಬ್​ ವಿವಾದ: ತರಗತಿ ಬಹಿಷ್ಕರಿಸಿ ಪ್ರತಿಭಟನೆ

hijab protest
Published on

ಮಂಗಳೂರು: ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಇಂದು ಕೂಡ ಹಿಜಾಬ್​ ವಿವಾದ ಭುಗಿಲೆದ್ದಿದೆ.

ದ‌ಕ್ಷಿಣ ಕನನ್ಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಒಳ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಹಿಜಾಬ್​ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾರೆ.

ಗುರುವಾರ ಹಿಜಾಬ್​ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಿಜಾಬ್​ಗೆ ಅವಕಾಶ ಕೊಡಬೇಡಿ ಎಂದು ಪಟ್ಟು ಹಿಡಿದ ಇತರ ವಿದ್ಯಾರ್ಥಿಗಳು, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಸುದ್ದಿ ಮಾಡಲು ಹೋದ ಮಾಧ್ಯಮದವರ ಮೇಲೆ ಒಂದು ಗುಂಪು ಹಲ್ಲೆ ಮಾಡಿತ್ತು. ಈ ವೇಳೆ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿತ್ತು. ಈ ಸಂಬಂಧ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net