ಹೊನ್ನಾವರದಲ್ಲಿ ಹೆದ್ದಾರಿ ಮೇಲೆ ಕುಸಿದ ಗುಡ್ಡ ಸಂಚಾರ ಅಸ್ತವ್ಯಸ್ತ

26hnr5- HILL RAIN
Published on

ಹೊನ್ನಾವರ: ತಾಲೂಕಿನಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ತಾಲೂಕಿನ ರಾಷ್ಟಿ›ೕಯ ಹೆದ್ದಾರಿ 69ಕ್ಕೆ ಹೊಂದಿಕೊಂಡಿರುವ ಗುಡ್ಡೆಬಾಳ ಗ್ರಾಮದ ಬಳಿ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ.


ಹೆದ್ದಾರಿ ಮೇಲೆ ಬಂಡೆಗಲ್ಲು ಸಮೇತ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಯಿತು. ನಂತರ ಬಂಡೆಗಲ್ಲು ಮತ್ತು ಮಣ್ಣನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net