ರಾಜ್ಯದಲ್ಲಿ ಕ್ರೈಂ ತಡೆಯುವಂತೆ ಚಾಮುಂಡೇಶ್ವರಿ ದೇವಿಯನ್ನು ಬೇಡಿದ್ದೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ

Araga Gnandra (1) (1)
Published on

ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಆಗಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ ಮತ್ತು ನಮ್ಮ ಪೊಲೀಸ್ ಇಲಾಖೆಗೆ ಶಕ್ತಿ ಕೊಡು ಎಂದು ಚಾಮುಂಡೇಶ್ವರಿ ದೇವಿಯನ್ನು ಕೇಳಿಕೊಂಡಿರುವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಗೃಹ ಸಚಿವರು ಬೆಳ್ಳಂಬೆಳಗ್ಗೆ ಚಾಮುಂಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕ್ರೈಂ ರೇಟ್ ಕಡಿಮೆ ಆಗೋದಲ್ಲ, ಕ್ರೈಂ ಆಗದಂತೆ ಚಾಮುಂಡೇಶ್ವರಿ ದೇವಿಯನ್ನು ಕೇಳಿಕೊಂಡಿದ್ದೇನೆ. ರಾಜ್ಯದ ಜನತೆಗೆ ಒಳ್ಳೆಯದು ಮಾದು, ಒಳ್ಳೆಯ ಮನಸ್ಸು ಕೊಡು ಎಂದು ಪ್ರಾರ್ಥಿಸಿದ್ದೇನೆ. ನಾನು ಗೃಹ‌ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ‌ ದರ್ಶನ ಪಡೆದಿದ್ದೇನೆ. ದರ್ಶನ ಮಾಡಿ ನನಗೆ ತುಂಬಾ ಸಂತೋಷವಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೀನಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net