ಕೌದಳ್ಳಿಯಲ್ಲಿ ಮನೆ ಬೆಂಕಿಗಾಹುತಿ

17 HANUR 3
Published on

 ಹನೂರು: ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸುಟ್ಟುಹೋಗಿದೆ.

ಗ್ರಾಮದ ಗುಲ್‌ಹೀರಾ ಬಾನು ಅವರು ಮೈಸೂರಿನಲ್ಲಿ ವಾಸಿಸುತ್ತಿದ್ದು, ಮನೆಗೆ ಬೀಗ ಹಾಕಲಾಗಿತ್ತು. ಸೋಮವಾರ ಮಧ್ಯಾಹ್ನ 1ರ ವೇಳೆಯಲ್ಲಿ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಗ್ನಿ ಜ್ವಾಲೆ ವ್ಯಾಪಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಒಂದೂವರೆ ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಆದರೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಗೂ ಚಾವಣಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್ ನಾಯಕ್, ಸಿಬ್ಬಂದಿ ರವಿ, ಅಶೋಕ್, ಲೋಕೇಶ್ ಬಂಡಾರಿ ಹಾಗೂ ಬಸವರಾಜು ಅಡುಗೆಮನೆ ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net