ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ!

hubli airport
Published on

ಹುಬ್ಬಳ್ಳಿ: ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇಂಡಿಗೊ ವಿಮಾನದ ಪೈಲಟ್​ನ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕೇರಳದ ಕೊಣ್ಣೂರಿನಿಂದ ಹುಬ್ಬಳ್ಳಿಗೆ ಬಂದ ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಿಸಿ ವಾಪಸ್ ಟೇಕ್ ಆಫ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನದಲ್ಲಿದ್ದ 7 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ನಿಲ್ದಾಣದ ಮೂಲಗಳು ಖಚಿತಪಡಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net