

ಹುಬ್ಬಳ್ಳಿ: 3 ವರ್ಷ ಕಂದಮ್ಮನ ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮನೆ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ, ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ. ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ, ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.