ಮನೆ ಮೇಲೆ ಬಿದ್ದ ಬೃಹತ್ ಮರ

24 hnl 1
Published on

ಹಾನಗಲ್ಲ: ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಾಳಂಬೀಡ ಗ್ರಾಮದ ಬಸವರಾಜ ಹನುಮಂತಪ್ಪ ಚಲವಾದಿ ಎಂಬುವರ ಮನೆ ಮೇಲೆ ಮರ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದ ಕುಟುಂಬದ ಐವರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಮರ ಬಿದ್ದಿದ್ದರಿಂದಾಗಿ ಗೋಡೆಗಳು ಸಂಪೂರ್ಣವಾಗಿ ಬಿರುಕು ಬಿಟ್ಟಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net