ಎ.ಜೆ.ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ

mng-6amy-aj Graduation
Published on


ಮಂಗಳೂರು : ಎ.ಜೆ.ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ನಾಲ್ಕನೇ ಪದವಿ ಪ್ರದಾನ ಸಮಾರಂಭ
ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸುರತ್ಕಲ್‌ನ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಯ ಡೀನ್ ದ್ವಾರಕೇಶ್ ಜಿ. ಎಸ್
ಮಾತನಾಡಿ ‘ ಯುವ ಪದವೀಧರರು ತಮ್ಮ ವ್ಯಾಸಂಗದ ಹಂತದಲ್ಲೇ ಸಂಶೋಧನೆ, ಅಭಿವೃದ್ಧಿ ಮತ್ತು ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.ಜೀವನದಲ್ಲಿ ಆತ್ಮವಿಶ್ವಾಸ ರೂಢಿಸಿಕೊಂಡರೆ ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮಿ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಮಾತನಾಡಿ ‘ಎ.ಜೆ.ಇಂಜಿನಿಯರಿಂಗ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ತಾಂತ್ರಿಕ ಶಿಕ್ಷಣ ಪಡೆಯಲು ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ತಾಂತ್ರಿಕ ಶಿಕ್ಷಣದ ಜತೆಗೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು, ಪ್ರಾಯೋಗಿಕ ಜ್ಞಾನ ಹೆಚ್ಚಿಸಿಕೊಳ್ಳುವುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತಿದೆ ಎಂದರು.
ಲಕ್ಷ್ಮಿ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.
ಶಾಂತರಾಮ ರೈ ಸಿ ರವರು ಕಾಲೇಜಿನ ಸಾಧನೆ, ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಡೀನ್ ಡಾ.ಮಹಾಬಲೇಶ್ವರಪ್ಪ ಪಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net