

ಬೆಂಗಳೂರು: ಜೆಡಿಎಸ್ನ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರಂದು ಚಾಲನೆ ನೀಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನು ಈ ಕಾರ್ಯಕ್ರಮದ ಮೂಲಕ ತೋರಿಸುತ್ತೇವೆ ಎಂದು ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಇನ್ನು 'ಜನತಾಮಿತ್ರ' ಸಮಾರೋಪ ಸಮಾರಂಭ ಅ.8ರಂದು ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮದ್ಯಾಹ್ನ 3ಕ್ಕೆ ಆಯೋಜಿಸಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.