ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರ್ಪಡೆಗೆ ಚೇತನ್​ಗೌಡ ಸಜ್ಜು: ತಂದೆ ಶಿವರಾಮೇಗೌಡರ ಕ್ಷೇತ್ರದಿಂದಲೇ ಸ್ಪರ್ಧೆ

mandya chethangowda shivaramegowda
Published on

ಮಂಡ್ಯ: ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರ ಪುತ್ರ ಚೇತನ್ ಗೌಡ, ತಂದೆಯ ಕ್ಷೇತ್ರದಲ್ಲೇ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಸಜ್ಜಾಗಿದ್ದಾರೆ.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆರ್.ಅಶೋಕ್ ವಿರುದ್ಧ ಸೋತಿದ್ದ ಚೇತನ್ ಗೌಡ ಈಗಾಗಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಬಿಂಡಿಗನವಿಲೆ ಜಿಪಂ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದಾರೆ.

ಅಪ್ಪ ಶಿವರಾಮೇಗೌಡ ಜೆಡಿಎಸ್ ಪಕ್ಷದಲ್ಲಿದ್ದರೆ, ಮಗ ಚೇತನ್​ 8 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದರು. ಇದೀಗ ಮಗನನ್ನು ಜೆಡಿಎಸ್​ಗೆ ಕರೆತರುವ ಮೂಲಕ ಎಂಎಲ್​ಎ ಟಿಕೆಟ್‌ಗೆ ಶಿವರಾಮೇಗೌಡ ಬೇಡಿಕೆ ಇಟ್ಟಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆ. ನಾನು ಜೆಡಿಎಸ್​ನಿಂದ ಸ್ಪರ್ಧೆ ಮಾಡಿದ್ರೆ ಹಾಲಿ ಶಾಸಕ ಸುರೇಶ್‌ಗೌಡ ಅವರನ್ನು ಮನೆಗೆ ಕಳುಹಿಸಲ್ಲ. ಅವರಿಗೆ ನನಗಿಂತ ಹೆಚ್ಚು ಭಾಷೆ ಗೊತ್ತಿದೆ. ಹಾಗಾಗಿ ಅವರನ್ನು ಲೋಕಸಭೆಗೆ ಪ್ರಮೋಷನ್ ಮಾಡೋಣ. ನಾನು ಅಥವಾ ಎಂಎಲ್​ಸಿ ಅಪ್ಪಾಜಿಗೌಡ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯಾಗ್ತೇವೆ ಎಂದು ನಾಗಮಂಗಲದಲ್ಲಿ ಶಿವರಾಮೇಗೌಡ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net