ಕಲಾಪ ಹಾಳು: ಕಾಂಗ್ರೆಸ್​ ಮತ್ತು ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ

jds protest
Published on

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಸಮಯವನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಳು ಮಾಡುತ್ತಿವೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದರು.

ವಿಧಾನಸೌಧ ಮತ್ತು ವಿಕಾಸಸೌಧದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಜೆಡಿಎಸ್​ ಶಾಸಕರು ಪ್ರತಿಭಟನೆ ಮಾಡಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪುರ, ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಉಭಯ ಸದನಗಳ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net