ಅಡ್ಡ ಮತದಾನ: ಗುಬ್ಬಿ ಶಾಸಕರ ಮನೆ ಮುಂದೆ ಪರ-ವಿರೋಧ ಪ್ರತಿಭಟನೆ, ವಾಕ್ಸಮರ

jds protest tumkur
Published on

ತುಮಕೂರು: ಗುಬ್ಬಿ ಶಾಸಕ ಶ್ರೀನಿವಾಸ್ ಮನೆ ಮುಂದೆ ಪರ-ವಿರೋಧ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾಕರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಕ್ಕೆ ಶುಕ್ರವಾರ ಗರಂ ಆದ ಎಚ್​ಡಿಕೆ, ವಾಸು ವಿರುದ್ಧ ವಾಗ್ದಾಳಿ ನಡೆಸಿದ್ದರು. ಪಕ್ಷ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದರು. ಈ ವಿಚಾರವಾಗಿ ಶನಿವಾರ ಬೆಳಗ್ಗೆ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜಿನಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ತುಮಕೂರಿನ ವಿದ್ಯಾ ನಗರದಲ್ಲಿರುವ ಶ್ರೀನಿವಾಸ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅತ್ತ ಶ್ರೀನಿವಾಸ್ ಬೆಂಬಲಿಗರೂ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ವಾಸು ಬೆಂಬಲಿಗರು ಹಾಗೂ ಜೆಡಿಎಸ್ ಮುಖಂಡರ ನಡುವೆ ವಾಕ್ಸಮರ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ನೀಡಿದ್ದಾರೆ. ಶ್ರೀನಿವಾಸ್ ವಿರುದ್ಧ ಒಂದು ಕಡೆ ಧಿಕ್ಕಾರ ಕೂಗುತ್ತಿದ್ದರೆ, ಮತ್ತೊಂದು ಕಡೆ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಲಾಗುತ್ತಿದೆ. ತುಮಕೂರಿನ ಮನೆ ಬಳಿಯೇ ಶ್ರೀನಿವಾಸ್ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net