ಮೈದುಂಬಿ ಹರಿಯುತ್ತಿರುವ ಕಬಿನಿ, ಕೆಆರ್​ಎಸ್: ನಾಳೆ ಬಾಗಿನ ಅರ್ಪಿಸಲಿದ್ದಾರೆ ಸಿಎಂ

KRS
Published on

ಬೆಂಗಳೂರು: ಭರ್ತಿಯಾಗಿರುವ ಕಬಿನಿ ಮತ್ತು ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಲಿದ್ದಾರೆ.

ನ.2ರ ಬೆಳಗ್ಗೆ 10ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್​ನಲ್ಲಿ ಹೊರಟು, ಎಚ್.ಡಿ.ಕೋಟೆ ತಾಲೂಕು ಕಬಿನಿ ಕಾಲನಿಗೆ ತಲುಪಲಿದ್ದು, ಮಧ್ಯಾಹ್ನ 12ಕ್ಕೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವರು.

ಮಧ್ಯಾಹ್ನ 12.30ಕ್ಕೆ ರಸ್ತೆ ಮಾರ್ಗವಾಗಿ ಶ್ರೀರಂಗಪಟ್ಟಣ ತಾಲೂಕು ಕೆ.ಆರ್.ಸಾಗರಕ್ಕೆ ಆಗಮಿಸಲಿದ್ದು, ಕೃಷ್ಣರಾಜ ಸಾಗರ ಅಣೆಕಟ್ಟೆ ಬಳಿ ಕಾವೇರಿ ಮಾತೆಗೆ ಮಧ್ಯಾಹ್ನ 1ಕ್ಕೆ ಪೂಜೆ ಸಲ್ಲಿಸಿ, ಜಲಾಶಯಕ್ಕೆ ಬಾಗಿನ ಅರ್ಪಿಸುವರು.

ಮಧ್ಯಾಹ್ನ 2.35ಕ್ಕೆ ಕೆ.ಆರ್​. ರಸ್ತೆ ಮಾರ್ಗವಾಗಿ ಮರು ಪ್ರಯಾಣ ಬೆಳೆಸಿ ಕೆ.ಆರ್.ಸಾಗರಕ್ಕೆ ತಲುಪಲಿದ್ದು, ಅಲ್ಲಿಂದ ಹೆಲಿಕಾಪ್ಟರ್​ನಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net