

ಬೆಂಗಳೂರು: ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಕನ್ನಡಿಗರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹೊಸ ಕೈಗಾರಿಕಾ ನೀತಿ 2020-25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ.100 ಹಾಗೂ ಘಟಕದಲ್ಲಿ ಒಟ್ಟಾರೆ ಶೇ.70 ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ವಿವರಿಸಿದರು.
ಡಾ.ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ.85 ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸೌಧಲ್ಲಿ ಎಚ್ಚರಿಸಿದರು.
ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಥಾಪಿಸುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುರುಗೇಶ್ ನಿರಾಣಿ ಹೇಳಿದರು.