ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ

n mahesh
Published on

ಬೆಂಗಳೂರು: ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್​, ಸಚಿವ ಆರ್​.ಅಶೋಕ್ ಸಮ್ಮುಖದಲ್ಲಿ ಬಿಜೆಪಿಗೆ ಮಹೇಶ್​ ಸೇರ್ಪಡೆಯಾದರು.

ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಎನ್‌.ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಬಳಿಕ ರಾಜಕೀಯ ಭವಿಷ್ಯ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹೇಶ್‌ ಬಿಜೆಪಿಯತ್ತ ವಾಲಿದ್ದರು. ಇತ್ತೀಚೆಗೆ ಬಿಜೆಪಿಗೆ ಸೇರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದ ಅವರು ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net