

ಕೊಳ್ಳೇಗಾಲ: ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ ಭಾನುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೆಂಗಳೂರಿನ ಜೆ.ಪಿ.ನಗರದಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಕನಕಪುರ ರಸ್ತೆಯಲ್ಲಿರುವ ವಿಜಯಾ ಅವರ ನಿವಾಸದ ಕಾನ್ಸಿ ಫೌಂಡೇಶನ್ನಲ್ಲಿ ಸೋಮವಾರ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಲಿದೆ.