ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆಯಲ್ಲಿ ಅಕ್ರಮ: ಗೋಕಾಕದಲ್ಲಿ ಆರೋಪಿ ಬಂಧನ

New-Project8-1(4)
Published on

ಬೆಳಗಾವಿ: ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ಕೆಪಿಟಿಸಿಎಲ್‌ನ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ‘ಸ್ಮಾರ್ಟ್ ವಾಚ್’ ಬಳಸಿ ಅಕ್ರಮ ನಡೆಸಿರುವ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಅಭ್ಯರ್ಥಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್‌ನಲ್ಲಿ ಖಾಲಿಯಿರುವ ಕಿರಿಯ ಸಹಾಯಕರ ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆದಿತ್ತು.

ಬೆಳಗಾವಿ ಜಿಲ್ಲೆ ಗೋಕಾಕ ನಗರದ ಜೆಎಸ್‌ಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಂಧಿತ ಅಭ್ಯರ್ಥಿ ಸಿದ್ದಪ್ಪ, ಸ್ಮಾರ್ಟ್ ವಾಚ್ ಮೂಲಕ ಪ್ರಶ್ನೆಪತ್ರಿಕೆಯ ಫೋಟೋ ತೆಗೆದು ಕಳುಹಿಸುತ್ತಿದ್ದ. ಬಳಿಕ ಅದೇ ಸ್ಮಾರ್ಟ್ ವಾಚ್ ನೋಡಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಇದು ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಅಭ್ಯರ್ಥಿಯ ಎಸಗಿರುವ ಕೃತ್ಯಗಳು ಸೆರೆಯಾಗಿವೆ. ಈ ಕುರಿತು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಗೋಕಾಕ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net