

ಬಳ್ಳಾರಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವೇಣಿ ವೀರಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದ KA34 F1228 ನಂಬರ್ನ ಕೆಎಸ್ಆರ್ಟಿಸಿ ಬಸ್ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್ ಚಲಿಸುತ್ತಿರುವಾಗಲೇ ನಿಯಂತ್ರಣತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.