

ಬೆಂಗಳೂರು: ಮೆಟ್ರೋ ಪಿಲ್ಲರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 45 ಪ್ರಯಾಣಿಕರ ಪೈಕಿ 29 ಮಂದಿ ಗಾಯಗೊಂಡ ಘಟನೆ ಭಾನುವಾರ ಮಧ್ಯರಾತ್ರಿ ಬೆಂಗಳೂರಲ್ಲಿ ಸಂಭವಿಸಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ಬಂದ ಕೆಎಸ್ಆರ್ಟಿಸಿ ಬಸ್ ಕೆಂಗೇರಿ ಬಳಿ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ 4 ಅಡಿ ಎತ್ತರದ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ಮೆಟ್ರೋ ಪಿಲ್ಲರ್ಗೆ ಡಿಕ್ಕಿಯಾಗಿದೆ.
ರಸ್ತೆ ಗುಂಡಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೆಟ್ರೋಪಿಲ್ಲರ್ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಗಾಯಗೊಂಡ 29 ಪ್ರಯಾಣಿಕರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.