ಹೊಳೆಗೆ ಬಿದ್ದ ಕೆಎಸ್ಸಾರ್ಟಿಸಿ ಬಸ್: ಧರ್ಮಸ್ಥಳದಿಂದ ಹೊರಟಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

New Project(27)
Published on

ಮಂಗಳೂರು: ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೊರಟಿದ್ದ‌ ಕೆಎಸ್​ಆರ್​ಟಿಸಿ ಬಸ್​ ಮಾರ್ಗಮಧ್ಯೆ ರಸ್ತೆಬದಿಯ ಹೊಳೆಗೆ ಬಿದ್ದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಗುರುವಾರ ಸಂಭವಿಸಿದೆ.

ಬಸ್​ನ ಟೈಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್​, ರಸ್ತೆಯಿಂದ ಸುಮಾರು 25 ಅಡಿ ಆಳದಲ್ಲಿ ಹರಿಯುತ್ತಿದ್ದ ಹೊಳೆಗೆ ಇಳಿದಿದೆ. ಹೊಳೆಯಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದ ಪರಿಣಾಮ ಭಾರೀ ಅನಾಹುತ ತಪ್ಪಿದೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net