

ಹುಬ್ಬಳ್ಳಿ: ಶಿರುಗುಪ್ಪಿ ಬಳಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ ಕೆಎಸ್ಆರ್ಟಿಸಿ ಐರಾವತ ಬಸ್ ಬರುತ್ತಿತ್ತು. ಹುಬ್ಬಳ್ಳಿಯಿಂದ ಹಂಪಿ ಕಡೆಗೆ ಕಾರು ಹೋಗುತ್ತಿತ್ತು. ಹುಬ್ಬಳ್ಳಿ ತಾಲೂಕಿನ ಶಿರುಗುಪ್ಪಿ ಬಳಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ಗುಜರಾತ್ನಿಂದ ಹಂಪಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರ ಪೈಕಿ ಕಾರು ಚಾಲಕ ಹಾಗೂ ಪ್ರವಾಸಿಗರೊಬ್ಬರು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ 7 ಜನರಲ್ಲಿ ಇಬ್ಬರು ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.