ಕೆಎಸ್ಸಾರ್ಟಿಸಿ ಬಸ್​-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

accident
Published on

ತುಮಕೂರು: ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಬೆಳಗ್ಗೆ ಕೆಎಸ್ಆರ್​ಟಿಸಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​, ತುಮಕೂರಿನಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಬಸ್​ ಮತ್ತು ಕಾರು ಒಂದೊಂದು ದಿಕ್ಕಿನಲ್ಲಿ ರಸ್ತೆಬದಿಯ ಹಳ್ಳಕ್ಕೆ ನುಗ್ಗಿವೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net