

ಬೆಂಗಳೂರು: ಮೈಸೂರು ಪ್ರಯಾಣಿಕರಿಗೆ ಗುಡ್ನ್ಯೂಸ್ ಇಲ್ಲಿದೆ. ಕರೊನಾ ಹಿನ್ನೆಲೆ 2 ತಿಂಗಳಿಂದ ಸ್ಥಗಿತಗೊಂಡಿದ್ದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಕ್ಕೆ ದಿನಗಣನೆ ಆರಂಭಗೊಂಡಿದೆ.
ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಮೈಸೂರು ಹೊರತುಪಡಿಸಿ ರಾಜ್ಯಾದ್ಯಂತ ಜೂ.21ರಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಜೂ.22ರಿಂದ ಅಂತಾರಾಜ್ಯ ಬಸ್ ಸಂಚಾರ ಶುರುವಾಗಿದೆ. ಇದೀಗ ಸೋಮವಾರದಿಂದ ಮೈಸೂರಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ಮುಂದಾಗಿದೆ.
ಜೂ.28ರ ಬೆಳಗ್ಗೆ 6 ಗಂಟೆಯಿಂದ ಜನರ ಬೇಡಿಕೆ ಆಧರಿಸಿ ಬಸ್ ಸಂಚಾರ ಆರಂಭಿಸಲು ನಿಗಮ ಮುಂದಾಗಿದೆ. ಶೇ.50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ಗಳು ಕಾರ್ಯಾಚರಣೆ ಮಾಡಲಿವೆ.