ಬೈಕ್​ ಸ್ಕಿಡ್​ ಆಗಿ ವಿದ್ಯಾರ್ಥಿಗಳಿಬ್ಬರ ಸಾವು: ರಜೆ ಹಿನ್ನೆಲೆ ಮುರುಡೇಶ್ವರಕ್ಕೆ ತೆರಳುವಾಗ ಅವಘಡ

New Project(14)
Published on

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಂಬದಕೋಣೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಬೈಕ್​ ಅಪಘಾತಕ್ಕೀಡಾಗಿದ್ದು, ಉಡುಪಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ.

ಆದಿತ್ಯ ರೆಡ್ಡಿ (18) ಮತ್ತು ತರುಣ್‌ ಕುಮಾರ್ ರೆಡ್ಡಿ(19) ಮೃತರು. ಆಂಧ್ರ ಪ್ರದೇಶ ಮೂಲದ ಇವರಿಬ್ಬರೂ ಉಡುಪಿಯ ಮಣಿಪಾಲ್​ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಜೆ ಇದ್ದ ಹಿನ್ನೆಲೆ ಬಾಡಿಗೆಗೆ ಬೈಕ್​ ಪಡೆದು ಮುರುಡೇಶ್ವರಕ್ಕೆ ಹೋಗುತ್ತಿದ್ದರು.

ಮಾರ್ಗಮಧ್ಯೆ ಬೈಕ್​ ಸ್ಕಿಡ್​ ಆಗಿದ್ದು, ಸ್ಥಳದಲ್ಲೇ ವಿದ್ಯಾರ್ಥಿಗಳಿಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net