

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಟ್ಯಾಂಕರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕುಶಾಲನಗರ ಕಡೆಯಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಸುಂಟಿಕೊಪ್ಪದ ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದೆ.
ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಕುಶಾಲನಗರ ಆಸ್ಪತ್ರೆಗೆ ರವಾನಿಸಲಾಗಿದೆ.