ಮಳೆಗೆ ತುಂಬಿ ಹರಿದ ಕೆರೆ-ಕಟ್ಟೆ

A lake-dam overflowing with rain
ಹುನಗುಂದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಜಮೀನುಗಳಲ್ಲಿ ನೀರು ನಿಂತಿರುವುದು.
Published on

ಹುನಗುಂದ: ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದು ಹಳ್ಳ, ಕೊಳ್ಳ, ಕೆರೆ-ಕಟ್ಟೆಗಳು ತುಂಬಿ ಹರಿದವು.
ರಾತ್ರಿ 2 ರಿಂದ ಬೆಳಗಿನ ಜಾವ 6 ಗಂಟೆಯವರೆಗೆ ಗುಡುಗು-ಮಿಂಚಿನಿಂದ ಸುರಿದ ಮಳೆಯಿಂದ ಜಮೀನುಗಳಲ್ಲಿ ನೀರು ನಿಂತಿದೆ.

ಮಳೆಯಾಶ್ರಿತ ಪ್ರದೇಶದಲ್ಲಿ ತೊಗರಿ, ಈರುಳ್ಳಿ, ಮೆಣಸಿನ ಬೆಳೆ ಮತ್ತು ಹಿಂಗಾರು ಬಿತ್ತನೆಗೆ ಅನುಕೂಲವಾಗಿದೆ. ಮಳೆಯಿಂದ ಹುನಗುಂದ -ಕರಡಿ ಮಾರ್ಗದ ಹಗೇದಾಳ-ಬೇಕಮಲದಿನ್ನಿ ಸೇತುವೆ ತುಂಬಿ ಹರಿದ ಕಾರಣ ಕೆಲಕಾಲ ಗ್ರಾಮದ ಸಂಪರ್ಕ ಸ್ಥಗಿತಗೊಂಡು ಜನರು ಪರದಾಡಿದ ಘಟನೆ ನಡೆಯಿತು. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ವ್ಯತ್ಯಯ ಉಂಟಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net