ಧಾರಾಕಾರ ಮಳೆ: ಮಂಗಳೂರಲ್ಲಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ, ರೈಲು ಸಂಚಾರ ರದ್ದು

rain manglore train
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಹೊರವಲಯದ ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದು ಮಾಡಿದೆ.

ಮಂಗಳೂರು-ಸುಬ್ರಹ್ಮಣ್ಯ ಮಾರ್ಗದ ಎರಡು ವಿಶೇಷ ರೈಲುಗಳ(.06488 ಮತ್ತು .06489) ಸಂಚಾರ ಗುರುವಾರ ಸ್ಥಗಿತಗೊಂಡಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬುಧವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಅಡಕೆ, ತೆಂಗು ತೋಟ ಸೇರದಂತೆ ಕೃಷಿ ಜಮೀನುಗಳು ಮಿನಿಕೆರೆಯಂತಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಳೆ ಹೆಚ್ಚಾದ ಹಿನ್ನೆಲೆ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net