

ರಾಯಚೂರು: ಯಾದಗಿರಿ ಜಿಲ್ಲೆಯ ಕೋಳೂರು ಬ್ರಿಜ್ ಬಳಿ ನಡುರಸ್ತೆಯಲ್ಲೇ ಉಪನ್ಯಾಸಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾನಪ್ಪ ಗೋಪಳಾಪುರ (59) ಕೊಲೆಯಾದವರು. ರಾಯಚೂರು ಜಿಲ್ಲೆಯ ದೇವದುರ್ಗದ ಬಾಲಕಿಯರ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮಾನಪ್ಪ ಕೆಲಸ ಮಾಡುತ್ತಿದ್ದರು. ಶಹಾಪುರ ಪೊಲೀಸರು ಸ್ಥಳಕ್ಕೆ ನೀಡಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಉಪನ್ಯಾಸಕರನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.