ಹಾಡಹಗಲೇ ರೈತನ ಮೇಲೆ ಚಿರತೆ ದಾಳಿ

02M.D.R.1
ಚಿರತೆ ದಾಳಿಯಿಂದ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಪ್ರಕಾಶ್.
Published on

ಮದ್ದೂರು: ತಾಲೂಕಿನ ಆತಗೂರು ಹೋಬಳಿಯ ಅಡಗನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಹಾಡಹಗಲೇ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.

ಗ್ರಾಮದ ರೈತ ಪ್ರಕಾಶ್ ಎಂಬಾತನ ಮೇಲೆ ಚಿರತೆ ದಾಳಿ ಮಾಡಿದ್ದು, ಇವರಿಗೆ ಕೆಸ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮೀನಿನ ಬಳಿ ಕುರಿಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ ಏಕಾಏಕಿ ದಾಳಿ ಮಾಡಿ ಕುರಿಯನ್ನು ತಿನ್ನಲು ಮುಂದಾಗಿದೆ. ಈ ಸಂದರ್ಭದಲ್ಲಿ ರೈತ ಕುರಿಯನ್ನು ರಕ್ಷಣೆಗೆ ಮಾಡಲು ಹೋದಾಗ, ಚಿರತೆ ರೈತನ ಮೇಲೆ ದಾಳಿ ಮಾಡಿ ಕಿವಿ ಮತ್ತು ಕೈ ಸೇರಿದಂತೆ ಇತರ ಭಾಗಗಳಲ್ಲಿ ಹಲ್ಲೆ ಮಾಡಿ ಗಾಯಗೊಳಿಸಿದೆ. ತಕ್ಷಣ ಕಿರುಚಿಕೊಂಡಾಗ ಅಕ್ಕಪಕ್ಕದ ಗ್ರಾಮಸ್ಥರು ಆಗಮಿಸಿದಾಗ ಚಿರತೆ ಅತಂಕಗೊಂಡು ಪರಾರಿಯಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯ ದೊಡ್ಡ ಮಟ್ಟದ ಗಾಯಗಳು ಆಗದೆ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ತಾಲೂಕು ವಲಯ ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯ ಅಧಿಕಾರಿ ರತ್ನಾಕರ್ ಸೇರಿದಂತೆ ಸಿಬ್ಬಂದಿ ಆಗಮಿಸಿ ರೈತ ಪ್ರಕಾಶ್‌ಗೆ ಚಿಕಿತ್ಸೆ ಕೊಡಿಸುವಲ್ಲಿ ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net