ಅರಣ್ಯ ಇಲಾಖೆಯ ಬೋನಿನಲ್ಲಿ ಚಿರತೆ ಸೆರೆ

ಅರಣ್ಯ ಇಲಾಖೆಯ ಬೋನಿನಲ್ಲಿ ಚಿರತೆ ಸೆರೆ
Published on

ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ಕಾಡಂಚಿನ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿದೆ.

ತಾಲೂಕಿನ ಬಾಚಹಳ್ಳಿಯಲ್ಲಿ ಜಾನುವಾರುಗಳನ್ನು ಕೊಲ್ಲುತ್ತಿದ್ದ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಗ್ರಾಮದ ಗುರುಪಾದಪ್ಪ ಎಂಬುವರ ತೋಟದ ಮನೆಯ ಸಮೀಪ ಬೋನು ಅಳವಡಿಸಿ ಒಳಗೆ ಮೇಕೆಯನ್ನು ಕೂಡಿಹಾಕಲಾಗಿತ್ತು. ಮೇಕೆಯನ್ನು ತಿನ್ನುವ ಆಸೆಗೆ ಬಂದ ಚಿರತೆ ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ.

ಬೋನಿನಿಂದ ಹೊರಬರಲು ಆರ್ಭಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ರಾತ್ರಿಯೇ ಅರಣ್ಯ ಸಿಬ್ಬಂದಿ ಚಿರತೆಯನ್ನು ಕೊಂಡೊಯ್ದು, ಬೆಳಗ್ಗೆ ಮೂಲೆಹೊಳೆ ಅರಣ್ಯಕ್ಕೆ ಬಿಡಲಾಯಿತು ಎಂದು ಆರ್‌ಎಫ್‌ಒ ಎನ್.ಪಿ. ನವೀನ್ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net