

ಶಿವಮೊಗ್ಗ: ಸುಳ್ಳು ನೋಬೆಲ್ ಪ್ರಶಸ್ತಿಗೆ ಸಿದ್ದರಾಮಯ್ಯ ಅರ್ಹರು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.
ನಗರದ ಮೈಲಾರೇಶ್ವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಾಜ್ಯ ಮತ್ತು ದೇಶದಲ್ಲಿ ಹಿಂದುತ್ವದ ಬುನಾದಿ ಮೇಲೆ ಬಿಜೆಪಿಯನ್ನು ಕಟ್ಟಿ ಬೆಳೆಸಲಾಗುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ದೇಶ ವಿರೋಧಿ, ಹಿಂದುತ್ವ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ದೂರಿದರು.
ಇದೀಗ ದಕ್ಷಿಣ ಭಾರತವನ್ನು ವಿಭಜನೆ ಮಾಡುವ ಬೇಡಿಕೆಯನ್ನು ಸಂಸದ ಡಿ.ಕೆ.ಸುರೇಶ್ ಇಟ್ಟಿದ್ದು ಅವರನ್ನು ಪಕ್ಷದಿಂದಲೇ ಕಾಂಗ್ರೆಸ್ ವಜಾಗೊಳಿಸಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರು ಡಿ.ಕೆ.ಸುರೇಶ್ ಹೇಳಿಕೆಯನ್ನು ವಿರೋಧಿಸಿದ್ದರೆ, ಇತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ತನ್ನ ಸಹೋದರ ದೇಶವಿಭಜನೆ ಮಾಡುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.