ಗ್ರಂಥಾಲಯ ಜ್ಞಾನದ ದೇಗುಲ

13 vikram 9
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮನುಷ್ಯ ಮಾನವೀಯ ಮೌಲ್ಯ ರೂಢಿಸಿಕೊಳ್ಳಲು ಹಾಗೂ ಸರ್ವತೋಮುಖ ಬೆಳವಣಿಗೆ ಪುಸ್ತಕಗಳಿಂದ ಮಾತ್ರ ಸಾಧ್ಯ. ಮಕ್ಕಳು ಮೊಬೈಲ್​ ಗೀಳಿನಿಂದ ಹೊರಬಂದು ಗ್ರಂಥಾಲಯದ ಸದುಪಯೋಗಪಡಿಸಿಕೊಂಡರೆ ಉತ್ತಮ ಬೆಳವಣಿಗೆ ಸಾಧ್ಯ ಎಂದು ಅಂಕಣಕಾರ್ತಿ ಎ.ಭಾರತಿ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ದಿನ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಾಲೆ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಏರ್ಪಡಿಸಿದ್ದ ಮ್ಯಾಗ್ಜಿನ್​ ರಚನಾ ಸ್ಫರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 7ನೇ ತರಗತಿ ವಿದ್ಯಾರ್ಥಿ ಹರ್ಷಾ ಗೊಂಡೆ 'ವರ್ಷದ ಓದುಗ' ಪ್ರಶಸ್ತಿ ಪಡೆದರು.
ಶಾಲೆ ಪ್ರಾಚಾರ್ಯೆ ಡಾ. ಅನಿತಾ ರೈ, ರಂಗನಾಥ ಕುಲಕರ್ಣಿ, ಶಿಕ್ಷಕರು, ವಿದ್ಯಾರ್ಥಿಗಳು, ಇತರರು ಇದ್ದರು. ನಿತಿನ್​ ವೆಂಕಟಗಿರಿ ಸ್ವಾಗತಿಸಿದರು. ಗ್ರಂಥಪಾಲಕ ಶ್ರೀಕಾಂತ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೀತಂ ಚಳಗೇರಿ ನಿರೂಪಿಸಿದರು. ಕಾರ್ತಿಕೇಯ ಗಸ್ತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net