ಬೆಂಗಳೂರಲ್ಲಿ ಸಮಾನ ಮನಸ್ಕರ ಸಭೆ ಸೆ.9ಕ್ಕೆ

PRANAVANANDA SWAMIJI Ediga
Published on

ಚಿತ್ರದುರ್ಗ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.9ರಂದು ಬೆಳಗ್ಗೆ 10ಕ್ಕೆ ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ವಿಶೇಷ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಈಡಿಗ ಮಹಾಮಂಡಳದ ಜಿಲ್ಲಾ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದಿನ ಸಭೆಯಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರು ಒಳಗೊಂಡು ಸಮುದಾಯದ ಪ್ರಮುಖರು ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ 500ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ರಾಷ್ಟ್ರೀಯ ಈಡಿಗ ಮಹಾಮಂಡಳದ ಅಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗುವುದು. ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯಗಳ ಬಗ್ಗೆ ಚರ್ಚಿಸಿ, ಹೋರಾಟ ರೂಪಿಸಲು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಉಪಾಧ್ಯಕ್ಷ ಕೆ.ಎಲ್.ಶ್ರೀನಿವಾಸ್, ಮುಖಂಡರಾದ ಉಮಾ, ಕೆ.ಟಿ.ರಮೇಶ್, ಪರಶುರಾಮ್, ಮಧು, ಸಂದೀಪ್, ಸುರೇಶ್, ಕುಮಾರ್, ಪರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net