ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ನಿಖಿಲ್ ಸ್ಪರ್ಧೆ: ಎಚ್.ಡಿ. ಕುಮಾರಸ್ವಾಮಿ

hdk nikhil
Published on

ರಾಮನಗರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನ ಮಂಡ್ಯದಿಂದಲೇ ಕಣಕ್ಕಿಳಿಸುವೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದರು.

ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಡಿಕೆ, ನಿಖಿಲ್ ಕುಮಾರಸ್ವಾಮಿಯನ್ನು ಮತ್ತೆ ಮಂಡ್ಯ ಲೋಕಸಭಾ ಚುನಾವಣೆಗೆ ನಿಲ್ಲಿಸುವೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಇತ್ತೀಚಿಗೆ ನೀಡುತ್ತಿರುವ ಹೇಳಿಕೆಗಳು ನನ್ನ ಮನಸ್ಸಿಗೆ ಬಂದಿದೆ. ಈ ಬಾರಿ ಮಂಡ್ಯ ಜನತೆ ನನ್ನನ್ನು ಕೈಬಿಡಲ್ಲ. ಮಂಡ್ಯ ಜಿಲ್ಲೆಯ ಜನರ ಮೇಲೆ ನನಗೆ ನಂಬಿಕೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net