

ಬೆಳಗಾವಿ: ಹಿರೇಬಾಗೇವಾಡಿ ಬಳಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಯಲ್ಲಾಪುರದ ನಿವಾಸಿ ವಾಸಿಂ ಖಾನ್(40), ಸಯ್ಯದ್ ಇಸ್ಮಾಯಿಲ್ (65), ಸುಶೀಲಾ ಫರ್ನಾಂಡಿಸ್(60) ಮೃತ ದುರ್ದೈವಿಗಳು. ಇವರೆಲ್ಲರೂ ಯಲ್ಲಾಪುರದಿಂದ ಬೆಳಗಾವಿಗೆ ಕಾರಿನಲ್ಲಿ ಹೋಗುತ್ತಿದ್ದರು.
ಮಾರ್ಗಮಧ್ಯೆ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಕಾರನಲ್ಲಿದ್ದ ಮೂವರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.