

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ರಸ್ತೆಯಲ್ಲಿ ಲಾರಿಯಲ್ಲಿ ತಾಂತ್ರಿಕ ದೋಷದಿಂದ ಉದ್ಭವಿಸಿದ ಬೆಂಕಿ ಲಾರಿಯ ಮುಂಭಾಗವನ್ನು ಬೆಂಕಿಗಾಹುತಿಗೊಳಿಸಿದ ಘಟನೆ ಬುಧವಾರ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಅದರ ಚಾಲಕ ಲಾರಿಯನ್ನು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದಾರೆ. ಆ ವೇಳೆಗೆ ವೇಗವಾಗಿ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸುವ ಮೊದಲೇ ಲಾರಿಯ ಮುಂಭಾಗ ಆಹುತಿ ಪಡೆದಿದೆ. ಘಟನೆಯ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಚಾಲಕರು ವಾಹನ ನಿಯಂತ್ರಿಸಿ ಹೆಚ್ಚಿನ ಅನಾಹುತ ಸಂಭವಿಸದಂತೆ ಸಹಕರಿಸಿದರು.