

ಬಂಟ್ವಾಳ: ತಿರುವು ರಸ್ತೆಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದು, ಸರ್ಕಾರಿ ಬಸ್ಸಿಗೆ ಡಿಕ್ಕಿಯಾದ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್‌ನಲ್ಲಿ ನಡೆದಿದ್ದು ಎಂಟು ಮಂದಿ ಗಾಯಗೊಂಡಿದ್ದಾರೆ.
ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆ ಮಧ್ಯೆ ವಗ್ಗ ಸಮೀಪದ ಕಾಡಬೆಟ್ಟು ತಿರುವಿನಲ್ಲಿ ಅತಿ ವೇಗದಿಂದ ಸಂಚರಿಸಿಕೊಂಡು ಬಂದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಈ ಸಂದರ್ಭ ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಸರ್ಕಾರಿ ಬಸ್‌ನ ಮುಂಭಾಗಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕ, ಬಸ್ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಸಿಸಿ ಕ್ಯಾಮರಾ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.