ರಸ್ತೆ ತಡೆಗೋಡೆಗೆ ಲಾರಿ ಡಿಕ್ಕಿ

28 HANUR 4
ಸಿಮೆಂಟ್ ಹೊತ್ತೊಯ್ಯುತ್ತಿದ್ದ ಲಾರಿ ಮಂಗಲ ಗ್ರಾಮದಲ್ಲಿ ರಸ್ತೆ ವಿಭಜಕ ತಡೆಗೋಡೆಗೆ ಡಿಕ್ಕಿ ಹೊಡೆದಿರುವುದು.
Published on

ಹನೂರು: ತಾಲೂಕಿನ ಮಂಗಲ ಗ್ರಾಮದಲ್ಲಿ ಶನಿವಾರ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಲಾರಿಯೊಂದು ರಸ್ತೆ ವಿಭಜಕ ತಡೆಗೋಡೆಗೆ ಡಿಕ್ಕಿ ಹೊಡಿದಿದೆ.

ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಳಗಿನ ಜಾವ ಸುಮಾರು 3ರಲ್ಲಿ ಸಿಮೆಂಟ್ ತುಂಬಿದ್ದ ಲಾರಿಯು ಹನೂರಿನಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿತ್ತು. ಈ ವೇಳೆ ಚಾಲಕ ನಿಯಂತ್ರಣ ತಪ್ಪಿ ಮಂಗಲ ಗ್ರಾಮದ ಬಳಿ ರಸ್ತೆ ವಿಭಜಕ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿಯ ತಳಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ವೇಳೆ ಜನರ ಸಂಚಾರವಿಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದಂತಾಗಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net