

ಹಿರೇಕೆರೂರ: ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಾವರಗಿ ಗ್ರಾಮದ ಜಮೀನಿನಲ್ಲಿ ಗುರುವಾರ ನಡೆದಿದೆ. ಪಟ್ಟಣದ ಚೌಡೇಶ್ವರಿ ನಗರದ ನಿವಾಸಿ ಯಮುನಪ್ಪ ಸಿದ್ದಪ್ಪ ಮಾಳಿ(30) ಮೃತ ವ್ಯಕ್ತಿ. ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ ಈತ, ವಿಷ ಸೇವನೆ ಮಾಡಿಕೊಂಡು, ತಾವರಗಿ ಗ್ರಾಮದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಸಾವಿಗೆ ಯಾವುದೇ ಸಂಶಯವಿಲ್ಲ ಎಂದು ತಂದೆ ಸಿದ್ದಪ್ಪ ಹಿರೇಕೆರೂರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.