

ಯಲ್ಲಾಪುರ: ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರ್ದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ತಾಲೂಕಿನ ಆರತಿಬೈಲ್ಘಟ್ಟದಲ್ಲಿ ನಡೆದಿದೆ.
ಶಾಂಪು ಆಯಿಲ್ ತುಂಬಿಕೊಂಡು ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ, ಆರತಿಬೈಲ್ ಘಟ್ಟದ ಕೊನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ, ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.