

ಶಿರಸಿ: ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದು ತಾಲೂಕಿನ ಬುಗಡಿಕೊಪ್ಪ ಸಮೀಪದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಆರು ಜಾನುವಾರುಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನವು ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬುಗಡಿಕೊಪ್ಪ ಸಮೀಪದ ಸೇತುವೆಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಒಂದು ಜಾನುವಾರು ಸ್ಥಳದಲ್ಲೇ ಮೃತಪಟ್ಟಿದೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.