ತುಮಕೂರಲ್ಲಿ ಜೆಡಿಎಸ್​ಗೆ ಮತ್ತೊಂದು ಶಾಕ್​! ಚುನಾವಣಾ ರಾಜಕೀಯದಿಂದ ದೂರ ಸರಿದ ಮಧುಗಿರಿ ಶಾಸಕ

madhugiri mla veerabhadrappa jds
Published on

ತುಮಕೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್​ನತ್ತ ಮುಖ ಮಾಡಿದ ಬಳಿಕ ಇದೀಗ ಜೆಡಿಎಸ್​ನ ಮತ್ತೊಬ್ಬ ಶಾಸಕ ಎಂ.ವಿ.ವೀರಭದ್ರಯ್ಯ ಚುನಾವಣಾ ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದಾರೆ.

ಐಎಎಸ್ ಅಧಿಕಾರಿಯಾಗಿದ್ದ ವೀರಭದ್ರಯ್ಯ ಸ್ವಯಂ ನಿವೃತ್ತಿ ಪಡೆದು ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಕ್ತಿಸೌಧ ಪ್ರವೇಶಿಸಿದ್ದರು. ಮುಂಬರುವ ವಿಧಾನಸಭೆ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲೇ ಆರೋಗ್ಯದ ನೆಪವೊಡ್ಡಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠರ ಬಳಿ ವೀರಭದ್ರಯ್ಯ ಸ್ಪಷ್ಟಪಡಿಸಿದ್ದು, ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಸಹಜವಾಗಿ ಜೆಡಿಎಸ್ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ತಳಮಳಕ್ಕೆ ಕಾರಣವಾಗಿದೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನಿಮ್ಮೆಲ್ಲರ ಪ್ರೀತಿ-ವಿಶ್ವಾಸಕ್ಕೆ ನಾನು ಚಿರಋಣಿ. ಮನೆಯಲ್ಲಿ ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಇಷ್ಟ ಪಡುತ್ತಿಲ್ಲ. ರಾಜಕೀಯಕ್ಕಾಗಿ ಮನೆಯನ್ನು ಎರಡು ಭಾಗ ಮಾಡಿಕೊಳ್ಳಲು ಇಷ್ಟವಿಲ್ಲ. ಈಗಾಗಲೇ ಕುಮಾರಸ್ವಾಮಿ ಮತ್ತು ಹೈಕಮಾಂಡ್‌ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ವೈಯಕ್ತಿಕವಾಗಿ ನನ್ನ ಆರೋಗ್ಯ ಸರಿಯಿಲ್ಲ. ನನ್ನದೇ ಆದಂತಹ ಸಮಸ್ಯೆಯಿದೆ. ಹಾಗಾಗಿ ನಾನು ಚುನಾವಣಾ ರಾಜಕೀಯದಿಂದ ದೂರ ಸರಿಯುತ್ತಿದ್ದೇನೆ. ನಿಮ್ಮ ಶಕ್ತಿ ಬಗ್ಗೆ ನನಗೆ ಭರವಸೆಯಿದೆ. ನಾನು ನಿಮ್ಮ ಪ್ರೀತಿಗೆ ಅಬಾರಿಯಾಗಿದ್ದೇನೆ. ರಾಜಕೀಯ ಹೊರತಾಗಿ ನಿಮ್ಮ ಜೊತೆಗಿರುವೆ ಎಂದು ಮಧುಗಿರಿಯಲ್ಲಿ ಕಾಯಕರ್ತರಿಗೆ ಜೆಡಿಎಸ್‌ ಶಾಸಕ ಎಂ.ವಿ. ವೀರಭದ್ರಯ್ಯ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net