ಬಂಟ್ವಾಳದಲ್ಲಿ ಮಗನನ್ನು ಕೊಂದು ನೇಣಿಗೆ ಶರಣಾದ ತಂದೆ

crime new
Published on

ಬಂಟ್ವಾಳ: ತಂದೆ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿಯ ಮನೆಯಲ್ಲಿ ಬಾಬು ನಾಯ್ಕ (58) ಎಂಬಾತ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿ ಸಾತ್ವಿಕ್ (15)ನನ್ನು ಕೊಲೆ ಮಾಡಿ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ ಕ್ಷುಲಕ ಕಾರಣಕ್ಕೆ ಗಲಾಟೆ ಮಾಡುತ್ತಿದ್ದರು. ಬುಧವಾರ ಬಾಬು ನಾಯ್ಕ ಅವರ ಪತ್ನಿ ಗೇರು ಬೀಜದ ಕಾರ್ಖಾನೆಗೆ ತೆರಳಿದ್ದ ವೇಳೆ ಮಧ್ಯಾಹ್ನ ಮಗನೊಂದಿಗೆ ಗಲಾಟೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಿ, ಬಳಿಕ ಮನೆಯ ಪಕ್ಕಾಸಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net