ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನ ಕೊಲೆ: ದುಷ್ಕರ್ಮಿಗಳ ಪತ್ತೆ ಪೊಲೀಸರ ಶೋಧ

Murder
Published on

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

ಇಸ್ಲಾಂ ಖಾನ್ (36) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಶಾಮಣ್ಣ ಗಾರ್ಡ್ ಬಳಿಯ ಈರಾ ಮಸೀದಿ ಮುಂಭಾಗದಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಂ ಖಾನ್​ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯ ಮೇಲೆಯೂ ಈ ಹಿಂದೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ದಾಖಲಾಗಿದ್ದವು.

ಇಸ್ಲಾಂ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದು ಗೂಡ್ಸ್ ಆಟೋ ಓಡಿಸಿಕೊಂಡಿದ್ದ. ಇದರ ಜೊತೆಗೆ ಕಾರ್ ಬ್ರೋಕರ್ ಆಗಿಯೂ ಕೆಲಸ ಮಾಡುತಿದ್ದ. ಸದ್ಯ ಆತನ ಕೊಲೆ ಮಾಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net