ಸ್ನೇಹಿತನ ಕೊಲೆ ಮಾಡಿದ್ದವನಿಗೆ ಜೀವಾವಧಿ ಸಜೆ

Published on

ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು

ಚೇಳೂರು : ಹಳೇ ದ್ವೇಷದ ಹಿನ್ನೆಲೆಯಲ್ಲಿ ಸ್ನೇಹಿತನನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಯ್ಯದ್ ಬಾಷಾ ಸೋನು ಶಿಕ್ಷೆಗೊಳಗಾದವ.
ಘಟನೆ ವಿವರ:
ಚೇಳೂರು ತಾಲೂಕಿನ ದಿಗವನೆಟ್ಟಕುಂಟಪಲ್ಲಿ ಗ್ರಾಮದ ನಾಸೀರ್ ಚೇಳೂರು ಪಟ್ಟಣದಲ್ಲಿ ಮೆಕಾನಿಕ್ ಆಗಿದ್ದ. ಈತನಿಗೆ ಸಯ್ಯದ್ ಬಾಷಾ ಸೋನು ಪರಿಚಯವಾಗಿತ್ತು. ಆಂಧ್ರಪ್ರದೇಶದ ತಿರುಪತಿಯ ಆಲಿಪಿರಿ ಠಾಣೆ ವ್ಯಾಪ್ತಿಯ ಕಳವು ಪ್ರಕರಣದಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ನಂತರ ಇಬ್ಬರ ನಡುವೆ ದ್ವೇಷ ಉಂಟಾಗಿ ನಾಸೀರ್ ಕೊಲೆಗೆ ಸಯ್ಯದ್‌ಬಾಷಾ ಸೋನು ಸಂಚು ರೂಪಿಸಿದ್ದ. 2022ರ ನ.29ರಂದು ಚೇಳೂರಿನ ಈಶ್ವರ ದೇವಾಲಯದ ರಸ್ತೆಯಲ್ಲಿ ಹೋಗುತ್ತಿದ್ದ ನಾಸೀರ್‌ನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಬಗ್ಗೆ ನಾಸೀರ್ ತಂದೆ ಜಮೀಲ್ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿ ಸಯ್ಯದ್ ಬಾಷಾ ಸೋನುನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಧೀಶ ಶ್ರೀಧರ್ ಅವರು ಸೆ.23ರಂದು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Oplus_131072
Oplus_131072
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net