ಕೋವಿಡ್ ಪಾಸಿಟಿವ್ ಬಂದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ !

suicide
Published on

ಹುಬ್ಬಳ್ಳಿ:  ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕ್ಯಾನ್ಸರ್ ಪೀಡಿತ ವ್ಯಕ್ತಿಯೊಬ್ಬರು ಮನನೊಂದು ಇಲ್ಲಿನ ಕಿಮ್ಸ್ ಕ್ಯಾನ್ಸರ್ ವಿಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕ ಕಬ್ಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ (67) ಆತ್ಮಹತ್ಯೆ ಮಾಡಿಕೊಂಡವರು.

ಕುತ್ತಿಗೆ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ಭೀಮಪ್ಪ ಭಾನುವಾರ ಕಿಮ್ಸ್‌ಗೆ ಆಗಮಿಸಿದ್ದರು. ಈ ವೇಳೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅಂದು ರಾತ್ರಿಯಾಗಿದ್ದರಿಂದ ಬೆಳಗ್ಗೆ ಕೋವಿಡ್ ವಾರ್ಡ್‌ಗೆ ಸ್ಥಳಾಂತರಿಸಲು ಸಿಬ್ಬಂದಿ ನಿರ್ಧರಿಸಿದ್ದರು. ಪ್ರತ್ಯೇಕ ವಾರ್ಡ್‌ನಲ್ಲಿ ವ್ಯವಸ್ಥೆ ಮಾಡಿದ್ದರು.

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಭೀಮಪ್ಪನಿಗೆ ಕೋವಿಡ್ ಪಾಸಿಟಿವ್ ಕೂಡ ಆಗಿದ್ದರಿಂದ ಬೇಸರಗೊಂಡಿದ್ದರು. ಇದೇ ವಿಚಾರವಾಗಿ ಕಿಟಕಿಗೆ ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net