

ಶಿವಮೊಗ್ಗ: ಎರಡೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬನ ಮೃತದೇಹ ಮಲವಗೊಪ್ಪದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಲವಗೊಪ್ಪದ ಜಿತನ್‌ಕುಮಾರ್(28) ಮೃತ ವ್ಯಕ್ತಿ. ಈತ ಗಾಡಿಕೊಪ್ಪದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು ದಂಪತಿ ಮಲವಗೊಪ್ಪದಲ್ಲಿ ವಾಸವಾಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ ಎನ್ನಲಾಗಿದೆ.
ಜಿತನ್‌ಕುಮಾರ್ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.