ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಲ್ಲೇ ಅರೆವೈದ್ಯಕೀಯ ವಿದ್ಯಾರ್ಥಿ ಸಾವು

death
Published on

ಮಂಗಳೂರು: ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ಅರೆವೈದ್ಯಕೀಯ ವಿದ್ಯಾರ್ಥಿ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ.

ಉಪ್ಪಿನಂಗಡಿ ನಿವಾಸಿ ನಾಗೇಶ್(23) ಮೃತ. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಭಾನುವಾರ ರಾತ್ರಿ ವಿಶ್ರಾಂತಿ ಕೊಠಡಿಗೆ ತೆರಳಿದ್ದ ನಾಗೇಶ್, ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net