ಬೆಂಗಳೂರಿನಲ್ಲಿ 'ಮಂಥನ' ಸಮಾವೇಶ ಉದ್ಘಾಟಿಸಿದ ನಿತಿನ್​ ಗಡ್ಕರಿ

New Project(13)
Published on

ಬೆಂಗಳೂರು: ಕೇಂದ್ರ ಭೂಸಾರಿಗೆ ಇಲಾಖೆ ಮತ್ತು ಹೆದ್ದಾರಿ ಪ್ರಾಧಿಕಾರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿರುವ ಮಂಥನ ಸಮಾವೇಶವನ್ನು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಉದ್ಘಾಟಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ 'ಮಂಥನ್' ಹೆಸರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಅಖಿಲ ಭಾರತಮಟ್ಟದ ಸಮ್ಮೇಳನದಲ್ಲಿ ದೇಶದ ಎಲ್ಲ ರಾಜ್ಯಗಳ ಸಾರಿಗೆ, ಕೈಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಗಳ ಸಚಿವರು ಪಾಲ್ಗೊಂಡಿದ್ದಾರೆ. ಹೆದ್ದಾರಿ, ಸಾರಿಗೆ, ಎಲೆಕ್ಟ್ರಿಕ್‌ ವೆಹಿಕಲ್ಸ್, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ‌ ಕುರಿತು ಸಮಾಲೋಚನೆ ನಡೆಯಲಿದೆ.

ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಕೇಂದ್ರ ಸಚಿವ ಜನರಲ್ ವಿ.ಕೆ. ಸಿಂಗ್, ರಾಜ್ಯ ಸಾರಿಗೆ ಸಚಿವ ಶ್ರೀರಾಮುಲು, ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್, ತೇಜಸ್ವಿಸೂರ್ಯ, ಹಿರಿಯ ಅಧಿಕಾರಿಗಳಾದ ಗಿರಿಧರ್ ಅರಮನೆ, ಎನ್ಎಚ್ಎಐ ಅಧ್ಯಕ್ಷೆ ಅಲಕಾ ಉಪಾಧ್ಯಾಯ ಸೇರಿದಂತೆ ವಿವಿಧ ರಾಜ್ಯಗಳ ಸಚಿವರು ಮತ್ತು ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net