ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ! | Belagavi

SUCIDE FINAL
Published on

Belagavi : ವೈದ್ಯಕೀಯ ವಿದ್ಯಾರ್ಥಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಾಸ್ಟೆಲ್​ನಲ್ಲಿ ನಡೆದಿದೆ.

ವಿದ್ಯಾರ್ಥಿನಿ ಪ್ರಿಯಾ ಕಾರ್ತಿಕ್​ (27) ಮೃತ ಎಂದು ತಿಳಿದುಬಂದಿದೆ. ಬೆಂಗಳೂರು ಮೂಲದ ಪ್ರಿಯಾ ಸೋಮವಾರ ಸಂಜೆಯವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪರೀಕ್ಷೆಗೆ ಹಾಜರಾಗಿದ್ದು, ತಡ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಇನ್ನು ಅಲ್ಲಿನ ವಿದ್ಯಾರ್ಥಿಗಳ ಮಾಹಿತಿ ಪ್ರಕಾರ, ಕೆಲವು ದಿನಗಳ ಹಿಂದೆಯೂ ಪ್ರಿಯಾ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಐಎಂಎಸ್ ನಿರ್ದೇಶಕ ಅಶೋಕ್ ಶೆಟ್ಟಿ, ವಿದ್ಯಾರ್ಥಿನಿ ಪ್ರಿಯಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇನ್ನು ಮರಣೋತ್ತರ ಪರೀಕ್ಷೆ ಮುಗಿದ ನಂತರ ಸಾವಿಗೆ ನಿಖರವಾದ ಕಾರಣ ಏನು ಎಂಬುದು ತಿಳಿದುಬರಲಿದೆ ಎಂದಿದ್ದಾರೆ.

ವಿದ್ಯಾರ್ಥಿನಿ ಪ್ರಿಯಾ ಬಿಐಎಂಎಸ್​ನಲ್ಲಿ ಮನೋವೈದ್ಯಶಾಸ್ತ್ರದಲ್ಲಿ ಪರಿಣಿತಿ ಹೊಂದಿದ್ದಳು. ಈ ವಿಚಾರದ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಕುರಿತು ನಿಕಟವಾದ ಮಾಹಿತಿ ಇನ್ನೂ ತಿಳಿದಿಲ್ಲ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net